Siddaramaiah – ಕೋಲಾರಕ್ಕೆ ಹುಲಿಯಾ ಗ್ರಾಂಡ್ ಎಂಟ್ರಿ !
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಆರು ತಿಂಗಳುಗಳು ಮಾತ್ರ ಬಾಕಿ ಉಳಿದಿವೆ.
ಹೀಗಾಗಿ ರಾಜಕೀಯ ಪಕ್ಷಗಳು ಜನರನ್ನು ಆಕರ್ಷಿಸಲು ಬಿರುಸಿನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.
ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದಾಗ ವಿವಿಧ ಸಮುದಾಯಗಳ ಮನವೊಲಿಸಲು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ ಅಂತಾ ರಾಜ್ಯ ರಾಜಕೀಯದಲ್ಲಿ ಮಾತುಗಳು ಹರಿದಾಡುತ್ತಿವೆ.
ಪ್ರಧಾನಿ ನರೇಂದ್ರ ಮೋದಿ ಪ್ರತಿಮೆಗಳಿಗೆ ಕೈ ಮುಗಿಯುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.
ಇದಕ್ಕೆ ಟಾಂಗ್ ಕೊಡಲು ಕಾಂಗ್ರೆಸ್ ಪಡೆಯೂ ಸಜ್ಜಾಗಿದ್ದು, ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ.
ಅದರಲ್ಲೂ ಕ್ಷೇತ್ರದ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದು ಬಹುತೇಕ ಫಿಕ್ಸ್ ಆಗಿದ್ದು, ಪ್ರತಿಮೆಗಳ ಪಾಲಿಟಿಕ್ಸ್ ಆರಂಭಿಸಿದ್ದಾರೆ.
ಹೀಗಾಗಿಯೇ ಜಿಲ್ಲೆಯ ದೇವಾಲಯ, ಮಂದಿರ,ಮಸೀದಿಗಳಿಗೆ ಭೇಟಿ ನೀಡಿ ಎಲ್ಲಾ ಜಾತಿ, ಧರ್ಮದ ಜನರ ಮನವೊಲಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಎರಡು ಖಾಸಗಿ ಏಜೆನ್ಸಿಗಳಿಂದ ಸರ್ವೇ ಮಾಡಿಸಿದ್ದಾರಂತೆ.
ಈ ಸರ್ವೇಯಲ್ಲಿ ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್ ಅನ್ನೋ ಮಾಹಿತಿ ಸಿಕ್ಕಿದೆಯಂತೆ.
ಹೀಗಾಗಿ ಕೋಲಾರದಿಂದ ಸ್ಪರ್ಧಿಸಲು ಹುಲಿಯಾ ಮುಂದಾಗಿದ್ದು, ಇಂದು ಜಿಲ್ಲೆಯಲ್ಲಿ ರೌಂಡ್ಸ್ ಹಾಕುತ್ತಿದ್ದಾರೆ.