Siddaramaiah | ಇದು ಅಸಮರ್ಥ ಮುಖ್ಯಮಂತ್ರಿಗಳ… ದಿವಾಳಿ ಸರ್ಕಾರ
ಬೆಂಗಳೂರು : ಇದು ಅಸಮರ್ಥ ಮುಖ್ಯಮಂತ್ರಿಗಳಿಂದ ಮ್ಯಾನೇಜ್ ಮಾಡಲ್ಪಡುತ್ತಿರುವ ದಿವಾಳಿ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಟ್ವಿಟ್ಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಪರಿಶಿಷ್ಟ ಹಾಗೂ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಾತ್ ರೂಂ ಕಿಟ್ ವಿತರಣೆ ಮಾಡುವ ಯೋಗ್ಯತೆ ಬಿಜೆಪಿ ಸರ್ಕಾರಕ್ಕೆ ಇಲ್ಲ. ಇದು ಅಸಮರ್ಥ ಮುಖ್ಯಮಂತ್ರಿಗಳಿಂದ ಮ್ಯಾನೇಜ್ ಮಾಡಲ್ಪಡುತ್ತಿರುವ ದಿವಾಳಿ ಸರ್ಕಾರ.
ದೇವರಾಜ ಅರಸು ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ ಕಳೆದ 3 ವರ್ಷಗಳಿಂದ ಅಗತ್ಯ ಅನುದಾನ ನೀಡಿಲ್ಲ.ಖಾಲಿ ಕೈಲಿರುವ ನಿಗಮಗಳಿಂದ ಶೋಷಿತರ ಕಲ್ಯಾಣ ಸಾಧ್ಯವೇ ಬಿಜೆಪಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಲ್ಲದೆ ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ 15 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿಕೊಟ್ಟಿದ್ದೆವು, ರಾಜೀವ್ ಗಾಂಧಿ ವಸತಿ ಯೋಜನೆ ಪ್ರಾಧಿಕಾರದಿಂದ ಯಾರು ಬೇಕಾದರೂ ಈ ಮಾಹಿತಿ ಪಡೆದುಕೊಳ್ಳಬಹುದು. ಇಡೀ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಂಜೂರು ಮಾಡಿ, ಕಟ್ಟಿಸಿಕೊಟ್ಟ ಒಂದೇ ಒಂದು ಮನೆ ತೋರಿಸಲಿ.
ನಾವು ಬೆಂಗಳೂರು ನಗರಕ್ಕೆ 1 ಲಕ್ಷ ಮನೆ ನಿರ್ಮಾಣ ಮಾಡಬೇಕೆಂದು ಬಜೆಟ್ ನಲ್ಲಿ ಹಣ ಒದಗಿಸಿ, 1072 ಎಕರೆ ಜಮೀನನ್ನು ನೀಡಿ, ಆನ್ ಲೈನ್ ಮೂಲಕ ಅರ್ಜಿ ಕರೆದು 50,000 ಮನೆಗಳನ್ನು ಮಂಜೂರು ಮಾಡಿದ್ದೆವು, ಬಿಜೆಪಿ ಸರ್ಕಾರ ಬಂದಮೇಲೆ ಎಲ್ಲಾ ಅರ್ಜಿಗಳನ್ನು ವಜಾ ಮಾಡಿದೆ. ಹೊಸದಾಗಿ ಅರ್ಜಿಯನ್ನು ಕರೆದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.







