ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಗುಡುಗಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಕೇಂದ್ರ ಪ್ರವೇಶ ಮಾಡದಿದ್ದರೂ ನಮ್ಮ ಪಾಲಿನ ಹಣ ನಮಗೆ ಏಕೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಈ ವೇಳೆ ಅಮ್ಮಾ ನಿರ್ಮಲಾ, ನಮ್ಮ ದುಡ್ಡು ನೀಡಮ್ಮ ಎಂದು ಹೇಳಿ ವ್ಯಂಗ್ಯವಾಡಿದ್ದಾರೆ.
15ನೇ ಹಣಕಾಸು ಆಯೋಗದಲ್ಲಿ ದಕ್ಷಿಣ ಭಾರತದ ಯಾವೊಬ್ಬ ವ್ಯಕ್ತಿಯೂ ಇರಲಿಲ್ಲ. ಇದರಿಂದಾಗಿ ದಕ್ಷಿಣ ಭಾರತಕ್ಕೆ ಅನ್ಯಯವಾಗಿದೆ. ಈ ಅನ್ಯಾಯಕ್ಕೆ ಹೊಣೆ ಕೇಂದ್ರ ಸರ್ಕಾರ. ಹಣಕಾಸು ಆಯೋಗ ನಿಯೋಜಿಸುವ ಅಧಿಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ ಎಂದು ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರು ಇದ್ದರು.