ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಟ್ವಿಟ್ಟರ್ ಮೂಲಕ ಹಾರೈಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿ, ನಮ್ಮ ಶಾಸಕಾಂಗ ಪಕ್ಷದ ನಾಯಕರು, ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಕೋವಿಡ್ ಸೋಂಕಿನಿಂದ ಆದಷ್ಟು ಬೇಗ ಚೇತರಿಸಿಕೊಂಡು ಆರೋಗ್ಯವಂತರಾಗಿ ಹಿಂದಿರುಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಟ್ವೀಟ್ ನಲ್ಲಿ, “ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಗಿದೆ. ಪ್ರತಿ ಪಕ್ಷದ ನಾಯಕರಾಗಿ ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವ ಮಾನ್ಯ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮಾಜಿ ಸಚಿವ ಜಮೀರ್ ಅಹ್ಮದ್ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಅವರು ಆದಷ್ಟು ಬೇಗ ಗುಣಮುಖರಾಗಿ ಉತ್ತಮ ಆರೋಗ್ಯದೊಂದಿಗೆ ಆಸ್ಪತ್ರೆಯಿಂದ ಮರಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಇತರ ನಾಯಕರು ಕೂಡ ಸಿದ್ದರಾಮಯ್ಯ ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.
ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರದಂತೆ ಹಲವು ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿ, ಸಿದ್ದರಾಮಯ್ಯ ಕೊರೊನಾದಿಂದ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.