ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲಿನ ಲಾಠಿಚಾರ್ಜ್ ಸಂಬಂಧ ಸಮುದಾಯದ
ಹೋರಾಟದ ಕಿಚ್ಚು ಜ್ವಾಲಾಮುಖಿಯಾಗಿ ಸರ್ಕಾರದ ಅಡಿಪಾಯಕ್ಕೆ ಬಿಸಿಮುಟ್ಟಿಸತೊಡಗಿದೆ ಈ ಬಗ್ಗೆ ಇನ್ ಸೈಡ್ ಸ್ಟೋರಿ ಸರಳವಾಗಿ ನಿಮ್ಮ ಮುಂದೆ….
ಪ್ರತಿಭಟನೆ ಮತ್ತು ಲಾಠಿಚಾರ್ಜ್: 2ಎ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತ ಸಮುದಾಯ ನಡೆಸುತ್ತಿರುವ ಹೋರಾಟವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಬೆಳಗಾವಿಯಲ್ಲಿ ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ಮತ್ತು ಪೋಲಿಸ್ ಲಾಠಿಚಾರ್ಜ್ ಮಾಡಿದ್ದರಿಂದ ಹಿಂಸಾಚಾರಕ್ಕೆ ಕಾರಣವಾಯಿತು.
ಸಿಎಂ ಸಿದ್ದರಾಮಯ್ಯ ಹೇಳಿಕೆ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಪ್ರತಿಭಟನೆ “ಅಸಂವಿಧಾನಿಕ” ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ.
ಗೃಹ ಸಚಿವರ ಸಮರ್ಥನೆ: ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಪ್ರತಿಭಟನಾಕಾರರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡಿದ್ದರಿಂದ “ಲಘು ಲಾಠಿಚಾರ್ಜ್” ಮಾಡಲಾಯಿತು ಎಂದು ಸಮರ್ಥಿಸಿಕೊಂಡರು.
ಪಂಚಮಸಾಲಿ ಸಮುದಾಯದ ಪ್ರತಿಕ್ರಿಯೆ: ಪಂಚಮಸಾಲಿ ಲಿಂಗಾಯತ ಧಾರ್ಮಿಕ ಮುಖ್ಯಸ್ಥ ಶ್ರೀ ಜಯಮೃತ್ಯುಂಜಯ ಸ್ವಾಮಿ, ಕಾನೂನು ಉಲ್ಲಂಘಿಸಿಲ್ಲ ಎಂದು ಪರಮೇಶ್ವರ್ ಅವರಿಗೆ ತಿರುಗೇಟು ನೀಡಿದರು.
ರಾಜಕೀಯ ಪರಿಣಾಮ: 2013 ರಲ್ಲಿ, ಬೆಳಗಾವಿಯ ಸುವರ್ಣ ವಿಕಾಸ ಸೌಧದಲ್ಲಿ ಎಸ್ಸಿ ಕೋಟಾ ವರ್ಗೀಕರಣಕ್ಕೆ ಒತ್ತಾಯಿಸಿ ಎಸ್ಸಿ ಎಡ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿತ್ತು. ಈಗ ಇದೇ ಪರಿಸ್ಥಿತಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಬಹುದು.
ಸಮುದಾಯದ ಬೇಡಿಕೆಗಳು ಮತ್ತು ಸರ್ಕಾರದ ಪ್ರತಿಕ್ರಿಯೆ:
ಕುರುಬ ಸಮುದಾಯದ ಪ್ರಭಾವ: ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಪಂಚಮಸಾಲಿ ಲಿಂಗಾಯತರನ್ನು 2ಎ ಗೆ ಸೇರಿಸುವ ಸಾಧ್ಯತೆ ಕಡಿಮೆ.
ಹಿಂದಿನ ಸರ್ಕಾರದ ನಿರ್ಧಾರ: ಬಸವರಾಜ ಬೊಮ್ಮಾಯಿ ಸರ್ಕಾರವು 2ಎ ಪ್ರವರ್ಗದಡಿ ಮುಸ್ಲಿಮರಿಗಿದ್ದ ಶೇ.4ರಷ್ಟು ಮೀಸಲಾತಿ ರದ್ದು ಮಾಡಿ 2ಸಿ, 2ಡಿ ಪ್ರವರ್ಗ ಸೃಷ್ಟಿಮಾಡುವ ನಿರ್ಧಾರ ಮಾಡಿತ್ತು.
ಸಿದ್ದರಾಮಯ್ಯ ಅವರ ಕ್ರಮ: ಸಿದ್ದರಾಮಯ್ಯ ಅವರು ವಿವರಣೆ ನೀಡಲು ಬಯಸಿದ್ದು, ಪ್ರತಿಭಟನಾ ನಿರತ ಸಮುದಾಯವನ್ನು ಸಮಾಧಾನ ಪಡಿಸಲು ಸ್ವಾಮೀಜಿ ಸೇರಿದಂತೆ ಮಧ್ಯಸ್ಥಗಾರರ ಸಭೆ ನಡೆಸುವಂತೆ ಸೂಚಿಸಿದ್ದಾರೆ.
ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮಾಡಿ..