Siddaramaiah – ಕೋಲಾರಕ್ಕೆ ಬರುತ್ತೇನೆ… ಕೈ ಕಾರ್ಯಕರ್ತರಿಗೆ ಹುಲಿಯಾ ಭರವಸೆ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನೋ ಮಾತುಗಳು ಕೂಡ ಹರಿದಾಡುತ್ತಿವೆ.
ಈ ನಡುವೆ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಬೇಕು ಎಂದು ಕೋಲಾರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಮನವಿ ಮಾಡಿಕೊಂಡಿದ್ದಾರೆ.
ಸಿದ್ದರಾಮಯ್ಯ ಇಂದು ಎಂದಿನಂತೆ ಮೈಸೂರಿನ ಆಂದೋಲನ ವೃತ್ತದ ಬಳಿ ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದರು.
ಈ ವೇಳೆ ಅಲ್ಲಿಗೆ ಕೋಲಾರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಬಂದು ಸಿದ್ದರಾಮಯ್ಯ ಜೊತೆ ಮಾತನಾಡಿದರು.
ಅಲ್ಲದೆ ಮುಂದಿನ ಚುನಾವಣೆಯಲ್ಲಿ ನೀವು ಕೋಲಾರದಿಂದಲೇ ಸ್ಪರ್ಧಿಸಬೇಕು ಎಂದು ಒತ್ತಡ ಹಾಕಿದ್ದಾರೆ.
ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ ಅವರು ಸರಿ ನಾನು ಒಂದು ದಿನ ಅಲ್ಲಿಗೆ ಬರುತ್ತೇನೆ, ಆಗ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಇದರೊಂದಿಗೆ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆ ಹುಟ್ಟುಕೊಂಡಿದೆ.