ಸಿದ್ದರಾಮಯ್ಯ ಗೆ ಅನಾರೋಗ್ಯ : ಮನೆಯಲ್ಲೇ ವಿಶ್ರಾಂತಿ Siddaramaiah
ಬೆಂಗಳೂರು : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜ್ವರದಿಂದ ಬಳಲುತ್ತಿದ್ದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಈ ಕಾರಣಕ್ಕೆ ಎರಡು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.
ಈ ನಡುವೆ ಅವರನ್ನು ಕೊರೊನಾ ಸೋಂಕಿನ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಲಿತಾಂಶ ನೆಗೆಟಿವ್ ಬಂದಿದೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.
ಈ ಮೊದಲು ಸಿದ್ದರಾಮಯ್ಯ ಕೊರೊನಾ ಸೋಂಕಿಗೆ ಸಿಲುಕಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಇಬ್ಬರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಬಳಿಕ ಯಡಿಯೂರಪ್ಪ ಎರಡನೆ ಬಾರಿಗೆ ಸೋಂಕಿಗೆ ಸಿಲುಕಿದ್ದರು.
ಹಾಗಾಗಿ ಸಿದ್ದರಾಮಯ್ಯ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರೆ ಸೋಂಕು ಇಲ್ಲ ಎಂದು ಖಚಿತವಾಗಿದೆ.