ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತ : ಸಿದ್ದರಾಮಯ್ಯ Siddaramaiah saaksha tv
ಬೆಂಗಳೂರು : ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿದ್ದರಾಮಯ್ಯನವರಿಗೆ ನಿನ್ನೆ ಧಿಡೀರ್ ಅಂತ ಸೋನಿಯಾ ಗಾಂಧಿ ಅವರ ಕಡೆಯಿಂದ ಬುಲಾವ್ ಬಂದಿತ್ತು. ಹೀಗಾಗಿ ಸಿದ್ದರಾಮಯ್ಯನವರು ದೆಹಲಿಗೆ ಭೇಟಿ ನೀಡಿದ್ದರು. ಈ ಭೇಟಿಯ ಬಗ್ಗೆ ನಾನಾ ಚರ್ಚೆಗಳು ನಡೆಯುತ್ತಿದ್ದವು. ಸಿದ್ದರಾಮಯ್ಯ ರಾಷ್ಟç ರಾಜಕಾರಣಕ್ಕೆ ಧುಮುಕುತ್ತಾರೆ ಎಂದು ಕೂಡ ವರದಿಗಳು ಬಿತ್ತರಿಯಾಗಿದ್ದವು.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿಯವರ ಜೊತೆಗಿನ ಇಂದಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು. ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ.
ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದು ಸ್ಪಷ್ಟಪಡಿಸಿದ್ದಾರೆ.