Siddaramaiah | ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು
ಬೆಂಗಳೂರು : ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನ ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ.
PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ.
ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ?
PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ.
ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.