ನಾಲಿಗೆ ಹಿಡಿತದಲ್ಲಿರಲಿ : ಕಟೀಲ್ ಗೆ ಸಿದ್ದರಾಮಯ್ಯ ( siddaramaiah )ವಾರ್ನಿಂಗ್
ಬೆಂಗಳೂರು : ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ಅವರು ಒಂದು ತಿಂಗಳ ಬಳಿಕ ಕಾಂಗ್ರೆಸ್ ಗೆ ರಾಜೀನಾಮೆ ಕೊಡಲಿದ್ದಾರೆ.
ಅದಕ್ಕಾಗಿಯೇ 90 ಜೊತೆ ಬಟ್ಟೆಗಳನ್ನ ಖರೀದಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ “ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ.
ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಸ್ವೀಟ್ ವಾರ್ನಿಂಗ್ ಕೊಟ್ಟಿದ್ದಾರೆ.










