Siddaramaiah | ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ.. ನಮ್ಮ ಉಸಿರು
ಬೆಂಗಳೂರು : ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಿಂದಿ ಸಂವಹನಕ್ಕಾಗಿ ಭಾರತದ ಭಾಷೆಯಾಗಿದೆ. ನಾವು ಹಿಂದಿಯನ್ನು ಸಂಪರ್ಕ ಭಾಷೆಯನ್ನಾಗಿ ಬಳಸಬೇಕು. ಹಿಂದಿ ಭಾಷೆಯ ಕುರಿತು ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ. ಹಿಂದಿಯನ್ನು ರಾಷ್ಟ್ರೀಯ ಭಾಷಯನ್ನಾಗಿ ಮಾಡುವುದರಲ್ಲಿ ತಪ್ಪೇನಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ.. ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ.
ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು "ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.
2/12#HindiImposition #Kannadiga— Siddaramaiah (@siddaramaiah) April 29, 2022
ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.
ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ.
ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ ಮಾತೃಭಾಷೆಯೂ ಹೌದು, ಪರಿಸರದ ಭಾಷೆ ಕೂಡಾ.
4/12#HindiImposition #Kannadiga— Siddaramaiah (@siddaramaiah) April 29, 2022
ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ ಮಾತೃಭಾಷೆಯೂ ಹೌದು, ಪರಿಸರದ ಭಾಷೆ ಕೂಡಾ ಎಂದು ಬರೆದುಕೊಂಡಿದ್ದಾರೆ.+
siddaramaiah-tweet on bjp leaders Hindi Imposition statement








