BJP | ಟಿಕೆಟ್ ಹಂಚಿಕೆಗೆ ಬಿಜೆಪಿ ಮಾನದಂಡ : ಸಿದ್ದು ವ್ಯಂಗ್ಯ
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಬಿಜೆಪಿ ಎಲೆಕ್ಷನ್ ತಯಾರಿ ಆರಂಭಿಸಿದೆ. ಟಿಕೆಟ್ ಹಂಚಿಕೆಗೆ ಬಿಜೆಪಿ ಮಾನದಂಡಗಳನ್ನು ವಿಧಿಸಿದ್ದು, ಹೈಕಾಂಡ್ ಮೂರು ತಂಡಗಳಿಂದ ಅಭ್ಯರ್ಥಿ ಆಯ್ಕೆಗೆ ಸಮೀಕ್ಷೆ ನಡೆಸಲು ಮುಂದಾಗಿದೆ.
ಈ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ನಿಗದಿಪಡಿಸಿರುವ ಮಾನದಂಡಗಳನ್ನು ಗಮನಿಸಿದರೆ ಬಿಜೆಪಿಗೆ ಅಭ್ಯರ್ಥಿಗಳ ತತ್ವಾರ ಉಂಟಾಗುವ ಗಂಭೀರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.ಬಿಜೆಪಿಗೆ ನುಡಿದಂತೆ ನಡೆದು ಅಭ್ಯಾಸವಿರಬೇಕಲ್ಲ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆಗಳ ಮಾನದಂಡದ ಮೂಲಕ ಬಿಜೆಪಿ ಸಚಿವರ ಟಿಕೆಟ್ ಪಡೆಯುವ ಅರ್ಹತೆಯನ್ನು ತೀರ್ಮಾನಿಸಲಿದೆಯಂತೆ.ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ.ಬಿಜೆಪಿಗೆ ನುಡಿದಂತೆ ನಡೆದು ಅಭ್ಯಾಸವಿರಬೇಕಲ್ಲ?
ಟಿಕೆಟ್ ಪಡೆದುಕೊಳ್ಳಲು ಬಿಜೆಪಿ ಹೈಕಮಾಂಡ್ ನಿಗದಿಪಡಿಲು ಯೋಚಿಸುತ್ತಿರುವ ಮಾನದಂಡಗಳಾದ ಕಾರ್ಯವೈಖರಿ, ಜನರ ಸಮಸ್ಯೆಗೆ ಸ್ಪಂದಿಸುವ ಗುಣ ಮತ್ತು ಜನಪ್ರಿಯತೆಯ ಪರೀಕ್ಷೆಯಲ್ಲಿ ಬಿಜೆಪಿಗೆ ಸೇರಿದ ಯಾವೊಬ್ಬ ಹಾಲಿ ಶಾಸಕನಾದರೂ ಪಾಸಾಗಲು ಸಾಧ್ಯವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದು, ಬಿಜೆಪಿಗೆ ನುಡಿದಂತೆ ನಡೆದು ಅಭ್ಯಾಸವಿರಬೇಕಲ್ಲ
40%ಗಿಂತ ಹೆಚ್ಚು ಕಮಿಷನ್ ಪಡೆದವರು, ಹಿಜಾಬ್, ಹಲಾಲ್, ಮೊದಲಾದ ವಿವಾದಗಳಿಂದ ಸಮಾಜದಲ್ಲಿ ಹೆಚ್ಚು ವೈಷಮ್ಯವನ್ನು ಹುಟ್ಟಿಸಿದವರು ಮತ್ತು ಅತೀ ಹೆಚ್ಚು ಸುಳ್ಳು ಹೇಳಿದವರು ಯಾರು ಎಂಬ ಮಾನದಂಡಗಳನ್ನು ನಿಗದಿಪಡಿಸಿದರೆ ಬಿಜೆಪಿಯ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ ಎಂದು ಬರೆದುಕೊಂಡಿದ್ದಾರೆ.