Siddaramaiah | ಸ್ವಾಭಿಮಾನಿ‌ ಕನ್ನಡಿಗನಾಗಿ ಅಮಿತ್ ಶಾ ಹೇಳಿಕೆ ಖಂಡಿಸ್ತೀನಿ

1 min read
Siddaramaiah Saaksha Tv

Siddaramaiah | ಸ್ವಾಭಿಮಾನಿ‌ ಕನ್ನಡಿಗನಾಗಿ ಅಮಿತ್ ಶಾ ಹೇಳಿಕೆ ಖಂಡಿಸ್ತೀನಿ

ಬೆಂಗಳೂರು : ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಿಂದಿ, ಇಂಗ್ಲೀಷ್, ತಮಿಳು,‌ ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ.

ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

siddaramaiah-twitter reaction about amit shah  saaksha tv

ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ.

ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ.

ಕೇಂದ್ರದಲ್ಲಿ  ಬಿಜೆಪಿ  ಅಧಿಕಾರಕ್ಕೆ ಬಂದ ದಿನದಿಂದ  ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ.

ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd