Siddaramaiah | ಮುಂಬರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆ
ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದಾರೆ.
ಮುಂದಿನ ಚುನಾವಣಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೀರಾ ಎಂಬ ಪ್ರಶ್ನೆಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ವಿಧಾನ ಸಭಾ ಚುನಾವಣೆಗೆ ಹಲವು ಕ್ಷೇತ್ರಗಳ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಆಹ್ವಾನಿಸುತ್ತಿದ್ದಾರೆ.
ಆದ್ರೆ ನಾನು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ. ವರುಣಾ, ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರದಿಂದಲ್ಲೂ ಒತ್ತಡವಿದೆ ಎಂದಿದ್ದಾರೆ.
ಅಲ್ಲದೇ ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದ ಸಿದ್ದರಾಮಯ್ಯ, ಸಕ್ರಿಯ ರಾಜಕಾರಣದಲ್ಲಿ ಇರುವುದಾಗಿ ತಿಳಿಸಿದರು.
ಸಿದ್ದರಾಮಯ್ಯರ ಈ ಹೇಳಿಕೆಗೆ ಟಾಂಗ್ ಕೊಟ್ಟಿರುವ ಬಿಜೆಪಿ, ಸಿದ್ದರಾಮಯ್ಯನವರೇ, ನೀವು ಎಷ್ಟು ಬಾರಿ ಇದೇ ನನ್ನ ಕೊನೆ ಚುನಾವಣೆ ಎಂದು ಹೇಳಿ, ಜನರನ್ನು ವಂಚಿಸುತ್ತೀರಿ ಎಂದು ಕುಟುಕಿದೆ. siddaramaiah upcoming-election-is-my-last-election