ಚಾಮರಾನನಗರ : ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡ ಜನರು

1 min read
Siddaramaiah

ಚಾಮರಾನನಗರ : ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡ ಜನರು

ಚಾಮರಾಜನಗರ : ಭಾನುವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಕೋವಿಡ್ ಸೋಂಕಿತರ ಕುಟುಂಬವು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ಬಳಿ ಅಳಲನ್ನು ತೋಡಿಕೊಂಡರು.

ಸಿದ್ದರಾಮಯ್ಯ ನವರು ಇಂದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟ ನೀಡಿದ್ದರು. ಈ ವೇಳೆ ಅವರು ಆಸ್ಪತ್ರೆ ಸಿಬ್ಬಂದಿ ಬಳಿ ಮಾಹಿತಿ ಕಲೆಹಾಕಿದ್ರು. ಅಲ್ಲದೇ ಆಡಳಿತ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡರು. ಬಳಿಕ ಅವರು ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಅವರ ಬಳಿ ಜಮಾಯಿಸಿದ ಜನರು ತಮ್ಮ ಕಷ್ಟ ಹೇಳಿಕೊಂಡರು.

Siddaramaiah

ಈ ವೇಳೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಹೊಮ್ಮ ಗ್ರಾಮದ ಸುರೇಂದ್ರ ರವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೋರೊನಾ ಸೋಂಕು ದೃಡವಾಗಿತ್ತು. ಅವರನ್ನು ಬಸವರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಭಾನುವಾರ ರಾತ್ರಿ ಆಕ್ಸಿಜನ್ ಸಿಗದೆ ಸಾವನ್ನಪ್ಪಿದ್ದಾನೆ ಆತನಿಗೆ ಕಳೆದ ಎರಡು ತಿಂಗಳ ಹಿಂದೆ ಕೆರಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿತ್ತು ಎಂದು ನೊಂದ ಕುಟುಂಬಸ್ಥರು ವಿವರಣೆ ನೀಡಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd