ಮುಂಬಯಿ: ಸಿಎಂ ಸಿದ್ದರಾಮಯ್ಯ ಅವರು ಶಿರಡಿಯ ಸಾಯಿಬಾಬಾ ಮಂದಿರಕ್ಕೆ (Shri Sai Baba Mandir) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದುಕೊಂಡಿದ್ದಾರೆ.
ಮಹಾರಾಷ್ಟ್ರ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಸಚಿವ ಎಚ್.ಕೆ. ಪಾಟೀಲ್, ಮಹಾರಾಷ್ಟ್ರ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚನ್ನಿತಾಲ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಆನಂತರ ಸಿಎ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ‍್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಬಿಜೆಪಿ ದೇಶದ ಪ್ರಜಾಪ್ರಭುತ್ವದ ತಳಹದಿಗೆ ಅಪಾಯಕಾರಿ. ಸಂವಿಧಾನದ ಆಶಯ, ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಸಂವಿಧಾನ ವಿರೋಧಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದರೆ, ದೇಶ ಅಪಾಯವಾಗಲಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯ ಜನವಿರೋಧಿ ನೀತಿಯನ್ನು ಕರ್ನಾಟಕದ ಮನೆಮನೆಗೂ ಕಾಂಗ್ರೆಸ್ ತಲುಪಿಸಿದ್ದರಿಂದ, ಜನರು ಬಿಜೆಪಿ ತಿರಸ್ಕರಿಸಿದರು. ಕರ್ನಾಟಕದಲ್ಲಿ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರ ನಡೆಯಲು ಬಿಜೆಪಿ ಕಾರಣ ಎಂದು ಗುಡುಗಿದ್ದಾರೆ.








