Heavy Rain | ಪ್ರವಾಹಪೀಡಿತ ಕೊಡಗಿಗೆ ಸಿದ್ದರಾಮಯ್ಯ ಭೇಟಿ
ಕೊಡಗು : ಮಲೆನಾಡಿನಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ.
ನಿರಂತರ ಮಳೆಯಿಂದಾಗಿ ಕೊಡಗಿನ ಜಿಲ್ಲೆಯಾದ್ಯಂತ ನಾನಾ ಅವಾಂತರಗಳು ಸೃಷ್ಠಿಯಾಗಿವೆ.
ಸಾಕಷ್ಟು ಮಂದಿ ಮನೆ – ಬೆಳೆ ಕಳೆದುಕೊಂಡಿದ್ದಾರೆ.
ಈ ನಡುವೆ ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ. ಮಂಗಳವಾರ ಭೇಟಿ ನೀಡಲಿದ್ದಾರೆ.

ಸಿದ್ದರಾಮಯ್ಯ ಮೂರು ದಿನಗಳ ಕಾಲ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳಲ್ಲಿದ್ದಾರೆ.
ಜುಲೈ 19ರಂದು ಕೊಡಗು, 20 ಹಾಗೂ 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಅಂದಹಾಗೆ ಜಿಲ್ಲೆಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಸುವ ಸಾಧ್ಯತೆಗಳಿವೆ.