ನಿಮ್ಮ ಅಂತ್ಯಕಾಲ ಆರಂಭ : ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಆಕ್ರೋಶ
ಬೆಂಗಳೂರು : ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಟ್ವಿಟ್ಟರ್ ನಲ್ಲಿ ಮಾಜಿ ಸಿಎಂಗಳ ಟ್ವೀಟ್ ವಾರ್ ಮುಂದುವರೆದಿದ್ದು, ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿ ಹೆಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೆÇೀಸು ಕೊಡುವ ‘ಸಿದ್ದಹಸ್ತ’ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ #ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ
ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೆÇೀಣಿಸಿ ‘ಅಹಿಂದ’ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ‘ಸಿದ್ದಹಸ್ತ ಶೂರರು’ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ‘ಅಲ್ಪಸಂಖ್ಯಾತರ ಅಂತ್ಯ ರಾಜಕಾರಣ’ದ #ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ.
ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ‘ಸಿದ್ದಹಸ್ತ ಸೂತ್ರಧಾರಿ’ಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್’ನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ‘ರಾಜಕೀಯ ನರಮೇಧ’ಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ.
2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ‘ಸಿದ್ದಸೂತ್ರ’ ಹಣೆದಿದ್ದು ಯಾರು ಎಂದು ಕುಟುಕಿದ್ದಾರೆ.
ಈ ‘ಸಿದ್ದಹಸ್ತರ ಸಿದ್ದಸೂತ್ರ’ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ.
ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್’ಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?
ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್’ಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ
ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ.
ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ‘ರಸಸ್ವಾದ’ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ?
ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ.
ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ‘ಕಿರಾತಕ ರಾಜಕಾರಣ’ ಮಾಡಿದಿರಿ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.