Ek love ya | ಏಕ್ ಲವ್ ಯಾ ಚಿತ್ರ ವೀಕ್ಷಿಸಿದ ಸಿದ್ದರಾಮಯ್ಯ.. ಏನಂದ್ರು..
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಇಂದು ರಾಜ್ಯದಾದ್ಯಂತ ರಿಲೀಸ್ ಆಗಿದೆ. ಈ ಸಿನಿಮಾವನ್ನು ಗುರುವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ವೀಕ್ಷಿಸಿದ್ದಾರೆ.
ನಟ, ನಿರ್ದೇಶಕ ಪ್ರೇಮ್ ಅವರು ಸಿನಿಮಾ ವೀಕ್ಷಣೆ ಮಾಡುವಂತೆ ಈ ಹಿಂದೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ಆಹ್ವಾನಿಸಿದ್ದರು.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಗುರುವಾರ ಸಿನಿಮಾವನ್ನು ವೀಕ್ಷಿಸಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ. ಇಂಥದ್ದೊಂದು ಸುಂದರ ಚಿತ್ರ ವೀಕ್ಷಣೆಗೆ ಅಹ್ವಾನಿಸಿದ್ದಕ್ಕಾಗಿ ಚಿತ್ರತಂಡಕ್ಕೆ ಧನ್ಯವಾದಗಳು. ಚಿತ್ರ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಶುಭ ಹಾರೈಸಿದ್ದಾರೆ.