Siddaramaiah | ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ
ಬೆಂಗಳೂರು : ಮುಂದಿನ ಚುನಾವಣೆಯಲ್ಲಿ ನಾವು 130 ರಿಂದ 150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಬೇರೆ ಪಕ್ಷಗಳಿಂದ ಕೆಲವರು ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು. ರಾತ್ರಿ ಕಂಡಿದ್ದ ಬಾವಿಗೆ ಹಗಲುಹೊತ್ತು ಯಾರಾದರೂ ಬೀಳುತ್ತಾರಾ? ಜೆಡಿಎಸ್ ಅಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಸುಳ್ಳು ಹೇಳುತ್ತಿದ್ದಾರೆ, ಅವರಿಗೆ ಬಾಯಿಯೇ ಬಂಡವಾಳ.
ನಾನು ಜೆಡಿಎಸ್ ಪಕ್ಷದ ಅಧ್ಯಕ್ಷನಾಗಿದ್ದಾಗ ಪಕ್ಷ ಮೊದಲ ಬಾರಿ 59 ಸೀಟುಗಳನ್ನು ಗೆದ್ದಿತ್ತು. ಅದಾದ ನಂತರ ಇದಕ್ಕಿಂತ ಕಡಿಮೆ ಸೀಟುಗಳನ್ನು ಜೆಡಿಎಸ್ ಗೆದ್ದಿದೆಯೇ ಹೊರತು ಹೆಚ್ಚಾಗಿಲ್ಲ. ಕಳೆದ ಬಾರಿ 37 ಸ್ಥಾನ ಗೆದ್ದರು, ಇದು ಪೂರ್ಣ ಬಹುಮತ ಪಡೆದಂತೆಯಾ?
ಜನರನ್ನು ತಾವು ಅಧಿಕಾರಕ್ಕೆ ಬರುತ್ತೇವೆ ಎಂದು ನಂಬಿಸಲು ಜೆಡಿಎಸ್ ನವರು ಸುಳ್ಳು ಸುಳ್ಳು ಹೇಳುತ್ತಾರೆ, ಮುಂದಿನ ಚುನಾವಣೆಯಲ್ಲಿ ನಾವು 130 ರಿಂದ 150 ಸ್ಥಾನಗಳನ್ನು ಗೆಲ್ಲುತ್ತೇವೆ, ಹೀಗಿದ್ದಾಗ ಮೈತ್ರಿ ಮಾಡಿಕೊಳ್ಳುವ ಅವಶ್ಯಕತೆ ಎಲ್ಲಿ ಬರುತ್ತೆ ಎಂದು ಪ್ರಶ್ನಿಸಿದ್ದಾರೆ.