RSS ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರ ಸ್ಥಾನಮಾನ ಏನು..?
ಬೆಂಗಳೂರು : ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಆರ್ ಎಸ್ ಎಸ್ ಮೂಲವನ್ನು ಪ್ರಶ್ನಿಸಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದರು. ಹೀಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ..

ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ.
ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು @BJP4Karnataka ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ?
ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ?
ಅವರೇ ಉತ್ತರಿಸಲಿ. 1/12#AryanRSS— Siddaramaiah (@siddaramaiah) May 28, 2022
ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?
ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು?
ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು?
ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳಲ್ಲವೇ? 4/12#AryanRSS— Siddaramaiah (@siddaramaiah) May 28, 2022
ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳಲ್ಲವೇ ಎಂದು ಸಿದ್ದರಾಮಯ್ಯ ಸುರಿಮಳೆಗೈದಿದ್ದಾರೆ.








