ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ಪ್ರತ್ಯೇಕ ಬಜೆಟ್ ಮಂಡಿಸಿ, ರಾಜ್ಯ ಸರ್ಕಾರಗಳಿಗೆ ಆರ್ಥಿಕ ನೆರವು ನೀಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಾಯಕರು ಕೊರೊನಾ ತಡೆಯುವ ಬದಲು ಬುರುಡೆ ಭಾಷಣ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕೊರೊನಾ ವಿಚಾರವನ್ನುಗಂಭೀರವಾಗಿ ಪರಿಗಣಿಸಿಲ್ಲ. ಕೇಂದ್ರ ಸರ್ಕಾರ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಎಲ್ಲಾ ರಾಜ್ಯಗಳಿಗೆ ಅದನ್ನ ಅನುಷ್ಠಾನ ಮಾಡಬೇಕು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತ್ಯೇಕ ಬಜೆಟ್ ಮಂಡಿಸಿದ್ದಾರೆ. ಇಲ್ಲೂ ಅದೇ ರೀತಿಯಾಗಿ ಪ್ರತೇಕ ಬಜೆಟ್ ಮಂಡಿಸಿ ರಾಜ್ಯ ಸರ್ಕಾರಗಳಿಗೆ ನೆರವು ನೀಡಬೇಕು ಎಂದು ಆಗ್ರಹಿಸಿದರು.
ತುರ್ತು ಪರಿಸ್ಥಿತಿ ಘೋಷಿಸಿದ್ರೆ ಸಾಲದು!
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಹೊರದೇಶಗಳಿಂದ ಬಂದವರಲ್ಲಿ ಮಾತ್ರ ಕೊರೊನಾ ಕಾಣಿಸಿಕೊಂಡಿದೆ. ಸ್ಥಳೀಯರಿಂದ ಕೊರೊನಾ ವೈರಸ್ ಸೋಂಕು ಹರಡಿಲ್ಲ. ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸದರೆ ಸಾಲದು, ಅಗತ್ಯವಾದ ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.








