ಬೆಂಗಳೂರು : ಇಂದು ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಪುಣ್ಯಸ್ಮರಣೆ ಹಿನ್ನೆಲೆ ಮಾಜಿ ಸಿಎಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ಬಾಬೂಜಿ ಅವರನ್ನು ಸ್ಮರಿಸಿದ್ದಾರೆ.
ಸಿದ್ದರಾಮಯ್ಯ ಅವರ ಟ್ವೀಟ್ ನಲ್ಲಿ, ಸ್ವಾತಂತ್ರ್ಯ ಹೋರಾಟಗಾರ, ದೂರದೃಷ್ಟಿಯ ಮುತ್ಸದ್ದಿ ನಾಯಕ, ಶೋಷಿತರ ವಿಮೋಚಕ, ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ಉಪಪ್ರಧಾನಿಯಾಗಿ, ಕೇಂದ್ರ ಸಚಿವರಾಗಿ ಆಧುನಿಕ ಭಾರತದ ನಿರ್ಮಾಣಕ್ಕೆ ನೀಡಿರುವ ಕೊಡುಗೆ ಸದಾ ಸ್ಮರಣೀಯ. ಪ್ರೀತಿಯ ಬಾಬೂಜಿ ಅವರಿಗೆ ಗೌರವದ ನಮನಗಳು ಎಂದು ಬರೆದುಕೊಂಡಿದ್ದಾರೆ.









