ಅಭಿಮಾನಿಯ ಕೊನೆ ಆಸೆ ಈಡೇರಿಸಲಿದ್ದಾರೆ ಹುಲಿಯಾ
ಮಂಡ್ಯ : ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊರ್ವ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದ ಕೃಷ್ಣ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈತ ಆತ್ಮಹತ್ಯೆಗೆ ಶರಣಾಗುವ ಮುನ್ನ ಪತ್ರವೊಂದು ಬರೆದಿದ್ದು, ಅದರಲ್ಲಿ ನನಗೆ ಜೀವನ ಸಾಕಾಗಿ ಹೋಗಿದೆ, ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನಿಸಿದ್ದೇನೆ, ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚಿತ್ರನಟ ರಾಕಿಂಗ್ ಸ್ಟಾರ್ ಯಶ್ ಅವರ ಅಭಿಮಾನಿ. ನನ್ನ ಅಂತ್ಯ ಸಂಸ್ಕಾರದಲ್ಲಿ ಅವರಿಬ್ಬರೂ ಪಾಲ್ಗೊಳ್ಳಬೇಕು ಎಂಬುದು ನನ್ನ ಕೊನೆಯ ಆಸೆಯಾಗಿದೆ ಎಂದು ತಿಳಿಸಿದ್ದ.
ನಿನ್ನೆ ಕೃಷ್ಣ ಆತ್ಮಹತ್ಯೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೃಷ್ಣ ವಿಷ ಸೇವಿಸಿರುವುದು ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಸ್ಪತ್ರೆ ಕರೆದೊಯ್ದಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿದು ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಡೆತ್ ನೋಟ್ ಪತ್ತೆಯಾಗಿದೆ.
ಇದನ್ನೂ ಓದಿ : ಮಾರ್ಚ್ 5 ರಂದು ಬಜೆಟ್ : ಇಂದು ರಾಜ್ಯ ಸಚಿವ ಸಂಪುಟ ಸಭೆ
ಪತ್ರದಲ್ಲಿ ಕುಟುಂಬಸ್ಥರಿಗೆ ಕ್ಷಮೆ ಕೇಳಿರುವ ಕೃಷ್ಣ, ನಾನು ರಾಕಿಂಗ್ ಸ್ಟಾರ್ ಯಶ್ ಹಾಗೂ ಸಿದ್ದರಾಮಯ್ಯ ಅವರ ಅಪ್ಪಟ ಅಭಿಮಾನಿ. ನನ್ನ ಅಂತ್ಯಕ್ರಿಯೆಯಲ್ಲಿ ಇವರಿಬ್ಬರೂ ಆಗಮಿಸಬೇಕೆಂಬುದು ನನ್ನ ಕೊನೆಯ ಆಸೆ. ದಯವಿಟ್ಟು ಈಡೇರಿಸಿ ಪ್ಲೀಸ್ ಎಂದು ಬರೆದುಕೊಂಡಿದ್ದಾನೆ.
ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ
ಇನ್ನು ಅದೇಗೋ ಸಿದ್ದರಾಮಯ್ಯವರಿಗೆ ಈ ವಿಷಯ ತಿಳಿದಿದ್ದು, ಅವರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.