Siddaramaiaha | ಖರ್ಗೆಯವರ ಬೆನ್ನಹಿಂದೆ ಕಾಂಗ್ರೆಸ್ ಪಕ್ಷ ಇದೆ
ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಸಿಐಡಿ ನೋಟೀಸ್ ನೀಡಿದ್ದು, ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಟ್ವಿಟ್ ನಲ್ಲಿ… ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನಹಿಂದೆ ಕಾಂಗ್ರೆಸ್ ಪಕ್ಷ ಇದೆ.
ಸಚಿವ ಸುನಿಲ್ ಕುಮಾರ್ ನೀಡಿದ ಹೇಳಿಕೆಯ ಬೆನ್ನಿನಲ್ಲಿಯೇ ಸಿಐಡಿ ಪೊಲೀಸರು ಪ್ರಿಯಾಂಕ್ ಖರ್ಗೆ ಅವರ ವಿಚಾರಣೆಗೆ ನೋಟೀಸ್ ನೀಡಿದ್ದನ್ನು ನೋಡಿದರೆ, ಬಿಜೆಪಿ ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಅಡಿಯಿಂದ ಮುಡಿವರೆಗೆ 100% ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ @BJP4Karnataka ಸರ್ಕಾರವನ್ನು ಸುಳ್ಳುಗಳ ಬಣ್ಣಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು, ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ. 3/3#PSISCAM
— Siddaramaiah (@siddaramaiah) April 25, 2022
ಅಡಿಯಿಂದ ಮುಡಿವರೆಗೆ 100% ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ಸುಳ್ಳುಗಳ ಬಣ್ಣಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು, ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. siddaramaiaha-slams karnataka bjp