ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.
ಸಿದ್ದರಾಮಯ್ಯನವರಿಗೆ ಕೊರೊನಾ ತಗುಲಿದ ಹಿನ್ನೆಲೆ ಆರೋಗ್ಯದ ಸ್ಥಿತಿ ಕುರಿತು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಜ್ವರ ಇದ್ದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ವೇಳೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ತಂಡ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.
ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ರಾತ್ರಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.