ಈ ಬಿಜೆಪಿ ಸರ್ಕಾರ ಹೇಳೋದೊಂದು, ಮಾಡೋದೊಂದು Siddaramaiah’s
ಬೆಂಗಳೂರು : ಈ ಬಿಜೆಪಿ ಸರ್ಕಾರ ಹೇಳೋದೊಂದು, ಮಾಡೋದೊಂದು ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಸದನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಯಯ್ಯ, ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದಿದೆ, ಅವರ ಪ್ರಣಾಳಿಕೆಯ ಭರವಸೆ ಪ್ರಕಾರ ಈಗ ಕನಿಷ್ಠ 90,000 ಕೋಟಿ ಹಣ ಖರ್ಚು ಮಾಡಬೇಕಿತ್ತಲ್ಲವಾ? ಆದರೆ ಖರ್ಚಾದ ಒಟ್ಟು ಹಣ ರೂ. 33,835 ಕೋಟಿ ಮಾತ್ರ. ಈ ಬಿಜೆಪಿ ಸರ್ಕಾರ ಹೇಳೋದೊಂದು, ಮಾಡೋದೊಂದು ಎಂದು ಗರಂ ಆಗಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದು ಬಿಟ್ಟರೆ ಆ ಭಾಗಕ್ಕೆ ಅನುದಾನ ಬಿಡುಗಡೆ ಆಗಿಲ್ಲ, ಅಭಿವೃದ್ಧಿ ಕಾರ್ಯಗಳು ಮುಂದೆ ಸಾಗಿಲ್ಲ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಎರಡೂವರೆ ವರ್ಷದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸದಸ್ಯರು, ಅಧ್ಯಕ್ಷರ ನೇಮಕವಾಗಿಲ್ಲ. ಹೀಗಿದ್ದಾಗ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆದು, ಅನುದಾನದ ಸದ್ಬಳಕೆಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ನಮ್ಮ ಐದು ವರ್ಷಗಳ ಆಡಳಿತದಲ್ಲಿ ಹೈದರಾಬಾದ್ ಕರ್ನಾಟಕ ವಿಶೇಷ ಮೀಸಲಾತಿ ಸೌಲಭ್ಯದಡಿ 30,000 ಹುದ್ದೆಗಳ ಭರ್ತಿ ಮಾಡಿದ್ದೆವು. @BJP4Karnataka ಸರ್ಕಾರ ಬಂದಮೇಲೆ ಒಂದೇ ಒಂದು ಹುದ್ದೆ ಭರ್ತಿಯಾದ ಉದಾಹರಣೆ ಇಲ್ಲ.
ಇದು ಕಲ್ಯಾಣ ಕರ್ನಾಟಕದ ಬಗ್ಗೆ ಬಿಜೆಪಿಗಿರುವ ನೈಜ ಕಾಳಜಿ. 9/17#Session
— Siddaramaiah (@siddaramaiah) December 24, 2021
ನಮ್ಮ ಐದು ವರ್ಷಗಳ ಆಡಳಿತದಲ್ಲಿ ಹೈದರಾಬಾದ್ ಕರ್ನಾಟಕ ವಿಶೇಷ ಮೀಸಲಾತಿ ಸೌಲಭ್ಯದಡಿ 30,000 ಹುದ್ದೆಗಳ ಭರ್ತಿ ಮಾಡಿದ್ದೆವು. ಬಿಜೆಪಿ ಸರ್ಕಾರ ಬಂದಮೇಲೆ ಒಂದೇ ಒಂದು ಹುದ್ದೆ ಭರ್ತಿಯಾದ ಉದಾಹರಣೆ ಇಲ್ಲ.ಇದು ಕಲ್ಯಾಣ ಕರ್ನಾಟಕದ ಬಗ್ಗೆ ಬಿಜೆಪಿಗಿರುವ ನೈಜ ಕಾಳಜಿ.
2021-22 ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಘೋಷಣೆಯಾದ ಅನುದಾನ ರೂ. 1,500 ಕೋಟಿ. ಇದರಲ್ಲಿ ಬಿಡುಗಡೆ ಯಾಗಿರುವುದು ರೂ. 378 ಕೋಟಿ. ಇನ್ನು ಉಳಿದಿರೋದು ಕೇವಲ ಎರಡು ತಿಂಗಳು? ಹೆಚ್ಚೆಂದರೆ ರೂ. 200 ಕೋಟಿ ಹಣ ಖರ್ಚಾಗಬಹುದು.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಿಸಿ, ವೀರಾವೇಶದಿಂದ ನೀವು ಅಷ್ಟೂ ಅನುದಾನ ಖರ್ಚು ಮಾಡಿದರೆ, ಈ ವರ್ಷ ರೂ. 3,000 ಕೋಟಿ ಅನುದಾನ ಕೊಡುತ್ತೇನೆ ಎಂದರು. ಎಲ್ಲಿದೆ ಹಣ ಎಂದು ಕೇಳಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದು ಬಿಟ್ಟರೆ ಆ ಭಾಗಕ್ಕೆ ಅನುದಾನ ಬಿಡುಗಡೆ ಆಗಿಲ್ಲ, ಅಭಿವೃದ್ಧಿ ಕಾರ್ಯಗಳು ಮುಂದೆ ಸಾಗಿಲ್ಲ. 7/17#Session
— Siddaramaiah (@siddaramaiah) December 24, 2021
2013 ರ ಚುನಾವಣೆ ಪ್ರಣಾಳಿಕೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಕೃಷ್ಣ ಹಾಗೂ ಕಾವೇರಿ ನದಿ ಕಣಿವೆ ಪ್ರದೇಶದ ನೀರಾವರಿ ಯೋಜನೆಗಳಿಗಾಗಿ ವಾರ್ಷಿಕ ರೂ. 10,000 ಕೋಟಿ ಅನುದಾನ ನೀಡುತ್ತೇವೆ ಎಂಬ ಭರವಸೆ ನೀಡಿದ್ದೆವು. ನಮ್ಮ 5 ವರ್ಷಗಳ ಅವಧಿಯಲ್ಲಿ ರೂ. 52,000 ಕೋಟಿ ಹಣ ನೀರಾವರಿ ಉದ್ದೇಶಕ್ಕಾಗಿ ಖರ್ಚು ಮಾಡಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.








