ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, “ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ.
I wish @siddaramaiah a speedy recovery from COVID-19.
— H D Devegowda (@H_D_Devegowda) August 4, 2020
ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, “ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಹಾರೈಸಿದ್ದಾರೆ.
ವಿರೋಧ ಪಕ್ಷದ ನಾಯಕ @siddaramaiah ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ.1/2— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 4, 2020
ಮತ್ತೊಂದು ಟ್ವೀಟ್ ನಲ್ಲಿ.. “ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು, ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳುವ ಮೂಲಕ ಅಮೂಲ್ಯವಾದ ಜೀವ ಮತ್ತು ಜೀವನವನ್ನು ರಕ್ಷಿಸಿಕೊಳ್ಳಬೇಕು ಸಾರ್ವಜನಿಕರಿಗೂ ಮನವಿ ಮಾಡಿದ್ದಾರೆ.
ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು, ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳುವ ಮೂಲಕ ಅಮೂಲ್ಯವಾದ ಜೀವ ಮತ್ತು ಜೀವನವನ್ನು ರಕ್ಷಿಸಿಕೊಳ್ಳಬೇಕು ಎಂದು ವಿನಮ್ರವಾಗಿ ಮನವಿ ಮಾಡುತ್ತೇನೆ.2/2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 4, 2020