ನಾವು ಗೆದ್ದಾಗ ಇವ್ನು ಏನಾಗಿದ್ನಂತೆ : ಕಟೀಲ್ ವಿರುದ್ಧ ಸಿದ್ದು ಕಿಡಿ
ಚಿತ್ರದುರ್ಗ : ನಾವು ಅಧಿಕಾರದಲ್ಲಿದ್ದಾಗ ನಾವು ಉಪಚುನಾವಣೆಯಲ್ಲಿ ಗೆದ್ದಿದ್ವಿ, ಆಗ ಇವ್ನು ಏನ್ ಆಗಿದ್ನಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಹಿರಿಯೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಒಳ ರಾಜಕಾರಣವೇ ಕಾರಣ ಎಂಬ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದರು.
ನಾವು ಅಧಿಕಾರ ಇದ್ದಾಗ ಎಲ್ಲಾ ಉಪಚುನಾವಣೆಗಳಲ್ಲಿ ಗೆದ್ದಿದ್ದೆವು. ಆಗ ಇವನೇನು ಆಗಿದ್ದನಂತೆ, ಇಲಿ ಬಿಲ ಸೇರಿಕೊಂಡಿದ್ದನಾ..? ಖಾರವಾಗಿ ಪ್ರಶ್ನಿಸಿದರು. ಜೊತೆಗೆ ನಳಿನ್ ಕುಮಾರ್ ಕಟೀಲ್ ಇನ್ನೂ ಅಪ್ರಬುದ್ಧ ರಾಜಕಾರಣಿ” ಎಂದು ತಿರುಗೇಟು ನೀಡಿದರು.
ಇದೇ ವೇಳೆ ವಿರೋಧ ಪಕ್ಷ ನಾಯಕರಾಗಲು ಸಿದ್ದರಾಮಯ್ಯ ಯೋಗ್ಯರಲ್ಲ ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಮಂತ್ರಿಯಾಗಲು ಈಶ್ವರಪ್ಪ ಅಯೋಗ್ಯ, ನಾಲಾಯಕ್” ಎಂದು ಟಾಂಗ್ ನೀಡಿದ್ರು.
`ಬಿಜೆಪಿಗರ ಶಕುನಿತಂತ್ರ’ ಹೇಳಿಕೆ `ಕಾಂಗ್ರೆಸ್ ಶಕ್ತಿ ಕುಂದಿಸಲ್ಲ’
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ನಾವು ವ್ಯವಸ್ಥಿತ ರೀತಿಯಲ್ಲಿ ಚುನಾವಣೆ ಎದುರಿಸಿದ್ದೇವೆ.
ಆದ್ರೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ವೈಯಕ್ತಿಕ ಪ್ರತಿಷ್ಠೆಯಿಂದ ಕಾಂಗ್ರೆಸ್ ಸೋತಿದೆ.
ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಸೋಲುಬೇಕೆಂದು ಸಿದ್ದರಾಮಯ್ಯ, ಶಿರಾದಲ್ಲಿ ಸೋಲಬೇಕೆಂದು ಡಿಕೆ ಶಿವಕುಮಾರ್ ಬಯಸಿದ್ದರು.
ಕಾಂಗ್ರೆಸ್ ನಲ್ಲಿ ನಾಯಕನ ಸೀಟ್ ಗೆ ಟವೆಲ್ ಹಾಕಲು ಈಗಾಗಲೇ ಆರಂಭವಾಗಿದೆ. ಕಾಂಗ್ರೆಸ್ ನಲ್ಲಿ ಒಳ ರಾಜಕಾರಣ ಮಾಡಿದ್ದೇ ಅವರ ಸೋಲಿಗೆ ಕಾರಣ ಎಂದಿದ್ದರು. ಇದಕ್ಕೆ ಚಿತ್ರದುರ್ಗದಲ್ಲಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel