ಕೊಡಗಿನ ಜನರು ನೇರ ನಡೆ-ನುಡಿಯ ನ್ಯಾಯದ ಪರವಾಗಿರುವ ಜನ
ಬೆಂಗಳೂರು : ಕೊಡಗಿನ ಜನರು ನೇರ ನಡೆ-ನುಡಿಯ ನ್ಯಾಯದ ಪರವಾಗಿರುವ ಜನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಡಗಿನಲ್ಲಿ ನಿಷೇಧ್ಞಾನೆ ಹೇರಿರುವ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಿರುವುದರಿಂದ ಕಾನೂನಿಗೆ ಮನ್ನಣೆ ನೀಡಿ ಆಗಸ್ಟ್ 26 ರ ಪ್ರತಿಭಟನೆಯನ್ನು ಮುಂದೂಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಪಕ್ಷದ ನಾಯಕರ ಜೊತೆ ಚರ್ಚಿಸಿ ಪ್ರತಿಭಟನೆಯ ಮುಂದಿನ ದಿನವನ್ನು ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ನಿಷ್ಕ್ರಿಯತೆ, ಭದ್ರತಾ ವೈಫಲ್ಯ ಮತ್ತು ಅತಿವೃಷ್ಟಿ ಪರಿಹಾರದಲ್ಲಿ ಸ್ಥಳೀಯ ಶಾಸಕರ ಭ್ರಷ್ಟಾಚಾರದ ವಿರುದ್ಧ ನಾವು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೆವು. ಲಕ್ಷಾಂತರ ಮಂದಿ ಭಾಗವಹಿಸುವ ಈ ಸಮಾವೇಶದಲ್ಲಿ ಸರ್ಕಾರದ ವೈಫಲ್ಯ ಬಯಲಾಗುತ್ತದೆ ಎಂಬ ಭೀತಿಯಲ್ಲಿ ನಿಷೇದಾಜ್ಞೆ ಹೇರಲಾಗಿದೆ.
ಕೊಡಗಿನ ಜನರು ನೇರ ನಡೆ-ನುಡಿಯ ನ್ಯಾಯದ ಪರವಾಗಿರುವ ಜನ. ನಮ್ಮ ಪ್ರತಿಭಟನೆ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧವಾಗಿತ್ತೇ ಹೊರತು ಕೊಡಗಿನ ಜನರ ವಿರುದ್ಧವಾಗಿರಲಿಲ್ಲ. ಅಲ್ಲಿನ ಜನ @BJP4Karnataka ಶಾಸಕರ ವಿರುದ್ಧ ತಿರುಗಿಬಿದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರುಬಿಜೆಪಿಗೆ ಬುದ್ಧಿ ಕಲಿಸಲಿದ್ದಾರೆ. 4/18#Kodagu
— Siddaramaiah (@siddaramaiah) August 23, 2022
ನಮ್ಮ ಪ್ರತಿಭಟನೆಗೆ ಹೆದರಿ ಅದನ್ನು ರದ್ದುಪಡಿಸಬೇಕೆಂಬ ಉದ್ದೇಶದಿಂದಲೇ ಬಿಜೆಪಿ ಅದೇ ದಿನ ಜನಜಾಗೃತಿ ಸಮಾವೇಶ ನಡೆಸಲು ಹೊರಟಿದೆ. ಪೊಲೀಸರ ನಿಷ್ಕ್ರಿಯತೆಯನ್ನು ಮುಚ್ಚಿಹಾಕುವ ದುರುದ್ದೇಶದಿಂದಲೇ ಪಕ್ಷದಿಂದ ಸಮಾವೇಶ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಜನ ಸುಲಭದಲ್ಲಿ ಅರ್ಥಮಾಡಿಕೊಳ್ಳುತ್ತಾರೆ.
ರಾಜ್ಯ @BJP4Karnataka ಸರ್ಕಾರದ ನಿಷ್ಕ್ರಿಯತೆ, ಭದ್ರತಾ ವೈಫಲ್ಯ ಮತ್ತು ಅತಿವೃಷ್ಟಿ ಪರಿಹಾರದಲ್ಲಿ ಸ್ಥಳೀಯ ಶಾಸಕರ ಭ್ರಷ್ಟಾಚಾರದ ವಿರುದ್ಧ ನಾವು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೆವು. ಲಕ್ಷಾಂತರ ಮಂದಿ ಭಾಗವಹಿಸುವ ಈ ಸಮಾವೇಶದಲ್ಲಿ ಸರ್ಕಾರದ ವೈಫಲ್ಯ ಬಯಲಾಗುತ್ತದೆ ಎಂಬ ಭೀತಿಯಲ್ಲಿ ನಿಷೇದಾಜ್ಞೆ ಹೇರಲಾಗಿದೆ. 2/18#Kodagu
— Siddaramaiah (@siddaramaiah) August 23, 2022
ಕೊಡಗಿನ ಜನರು ನೇರ ನಡೆ-ನುಡಿಯ ನ್ಯಾಯದ ಪರವಾಗಿರುವ ಜನ. ನಮ್ಮ ಪ್ರತಿಭಟನೆ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧವಾಗಿತ್ತೇ ಹೊರತು ಕೊಡಗಿನ ಜನರ ವಿರುದ್ಧವಾಗಿರಲಿಲ್ಲ. ಅಲ್ಲಿನ ಜನ ಬಿಜೆಪಿ ಶಾಸಕರ ವಿರುದ್ಧ ತಿರುಗಿಬಿದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರು ಬಿಜೆಪಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಕಿಡಿಕಾರಿದ್ದಾರೆ.