ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ, ಅವರ ಬಳಿ ಹಣವೇ ಇಲ್ಲ : ಸಿದ್ದರಾಮಯ್ಯ
ಮೈಸೂರು : ರಾಜ್ಯ ಬಜೆಟ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ವ್ಯಂಗ್ಯವಾಡಿದ್ದಾರೆ. ಇವರ ಬಜೆಟ್ ಮೇಲೆ ಯಾವ ನಿರೀಕ್ಷೆಯೂ ಇಲ್ಲ. ಕಾರಣ ಇವರ ಬಳಿ ಹಣವೇ ಇಲ್ಲ ಎಂದಿದ್ದಾರೆ. ಬಜೆಟ್ ಎಲ್ಲಾ ಪ್ರಶ್ನೆಗೂ ಉತ್ತರ ಎಂಬ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಟಾಂಗ್ ಕೊಟ್ಟಿರುವ ಸಿದ್ದರಾಮಯ್ಯ ಅವರು ನಾನು ಕೇಳಿದ ಪ್ರಶ್ನೆಗಳಿಗೆ ಇನ್ನು ಉತ್ತರ ಕೊಟ್ಟಿಲ್ಲ. ಇನ್ನು ಬಜೆಟ್ನಲ್ಲಿ ಏನು ಉತ್ತರ ಕೊಡುತ್ತಾರೆ. ಪ್ರಶ್ನೆ ಕೇಳಿದ್ರೆ ಬರೆದುಕೊಂಡು ಬಂದು ಉತ್ತರ ಕೊಡುತ್ತಾರೆ. ಇವರಿಂದ ಯಾವುದೇ ನಿರೀಕ್ಷೆ ಇಲ್ಲ ಲೇವಡಿ ಮಾಡಿದ್ದಾರೆ.
ಲಸಿಕೆ ಬಗ್ಗೆ ಯಾವುದೋ ವದಂತಿಗಳನ್ನು ನಂಬಿ ನೀವು ಬಲಿಪಶುಗಳಾಗಬೇಡಿ : ಕೆ. ಸುಧಾಕರ್
ಇದೇ ವೇಳೆ ಬಿಪಿಎಲ್ ಕಾರ್ಡ್ ಬಗ್ಗೆ ಉಮೇಶ್ ಕತ್ತಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿಸ್ಸರಾಮಯ್ಯನವರು , ಅದು ಕತ್ತಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಪಾಲಿಕೆ ಮೇಯರ್ , ಉಪಮೇಯರ್ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಜೆಡಿಎಸ್ ತಾನಾಗಿ ಬಂದು ಮೈತ್ರಿ ಮಾಡಿಕೊಂಡರೆ ನನ್ನ ವಿರೋಧ ಇಲ್ಲ. ಹಳೆಯ ಒಪ್ಪಂದದಂತೆ ನಮಗೆ ಮೇಯರ್ ಸ್ಥಾನ ಅವರು ನೀಡಬೇಕು. ಕೊಟ್ಟರೆ ಮೈತ್ರಿ ಮುಂದುವರಿಸಲು ಹೇಳಿದ್ದೇನೆ. ಎಲ್ಲರಿಗೂ ಒಗ್ಗಟ್ಟಾಗಿರಿ ಜಗಳ ಮಾಡಿಕೊಳ್ಳಬೇಡಿ ಎಂದು ಹೇಳಿದ್ದೇನೆ ಎಂದು ಹೇಳುವ ಮೂಲಕ ತವರಿನಲ್ಲಿ JDS ಮೈತ್ರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ನೈಟ್ ಕರ್ಫ್ಯೂ ಮರುಜಾರಿಗೊಳಿಸುವ ಯಾವುದೇ ಚಿಂತನೆ ಇಲ್ಲ : ಕೆ. ಸುಧಾಕರ್
ಜೊತೆಗೆ ರಾಜ್ಯದಲ್ಲಿ ಕೊರೊನಾ 2ನೇ ಅಲೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಅವರು ಬಿಜೆಪಿ ಈ ವಿಚಾರದಲ್ಲೂ ಭ್ರಷ್ಟಾಚಾರ ಮಾಡಲು ಕಾಯುತ್ತಿರುವಂತಿದೆ. ಭ್ರಷ್ಟಾಚಾರವೇ ಇವರ ಕೆಲಸ. ಎಲ್ಲಿ ಕೆಲಸ ಇದೆಯೋ ಅಲ್ಲಿ ದುಡ್ಡು ಹೊಡೆಯುತ್ತಾರೆ. ಕೊರೊನಾ ಮೊದಲ ಅಲೆಯಲ್ಲೂ ಭ್ರಷ್ಟಾಚಾರ ಮಾಡ್ತಿದ್ದಾರೆ. ಇದನ್ನು ನಾನು ವಿಧಾನಸಭೆಯಲ್ಲೇ ಹೇಳಿದ್ದೇನೆ. ಈಗಲೂ ಅದೇ ನಡೆಯುತ್ತದೆ . ಈ ಸರ್ಕಾರ ಯಾವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಎರಡನೇ ಅಲೆ ಗಂಭೀರವಾಗಿ ಪರಿಗಣಿಸಬೇಕು. ಕೇರಳ ಇರಲಿ ಆಫ್ರಿಕಾದಿಂದಲೇ ಬರಲಿ ಅಗತ್ಯ ಮುಂಜಾಗ್ರತೆ ವಹಿಸಿ ಎಂದಿದ್ದಾರೆ.
ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ : ಫೇಸ್ ಬುಕ್ ನಲ್ಲಿ ಸಚಿವರ ಹೆಸರಲ್ಲಿ ಹಣ ದೋಚುತ್ತಾರೆ ಎಚ್ಚರ..!