ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಕೊರೊನಾ ನಿಯಮಾವಳಿಗಳನ್ನ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೂ ಸೇರಿದಂತೆ ಅನೇಕರ ವಿರುದ್ಧ ದೂರು ದಾಖಲಾಗಿತ್ತು.. ಇದೇ ಪ್ರಕರಣ ಸಂಬಂಧ ಮಾಜಿ ಸಿಎಂ ( ವಿಪಕ್ಷ ನಾಯಕ ) ಸಿದ್ದರಾಮಯ್ಯ ಅವರಿಗೆ ಈಗ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಅಲ್ಲದೇ ಮಂಗಳವಾರ ನ್ಯಾಯಾಲಯದ ಎದುರು ಹಾಜರಾಗುವಂತೆ ಸೂಚಿಸಲಾಗಿದೆ..
ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯನ್ನು ಹಮ್ಮಿಕೊಂಡಿತ್ತು. ಕೋವಿಡ್ ಸಂದರ್ಭದಲ್ಲೂ ಪಾದಯಾತ್ರೆ ನಡೆಸಿದ ಕಾರಣಕ್ಕಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಪಾದಯಾತ್ರೆಯಲ್ಲಿ ಭಾಗಿಯಾದವರ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲಾಗಿತ್ತು.