ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೇಕೆದಾಟು : ಬೊಮ್ಮಾಯಿ ಗಟ್ಟಿ ನಿರ್ಧಾರಕ್ಕೆ ನಮ್ಮ ಬೆಂಬಲ , ಆದ್ರೆ ಒಡಕು ಬಾಯಿಗಳನ್ನ ಮುಚ್ಚಿಸಿ – ಸಿದ್ದರಾಮಯ್ಯ

Namratha Rao by Namratha Rao
August 13, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಮೇಕೆದಾಟು : ಬೊಮ್ಮಾಯಿ ಗಟ್ಟಿ ನಿರ್ಧಾರಕ್ಕೆ ನಮ್ಮ ಬೆಂಬಲ , ಆದ್ರೆ ಒಡಕು ಬಾಯಿಗಳನ್ನ ಮುಚ್ಚಿಸಿ – ಸಿದ್ದರಾಮಯ್ಯ

ಮೇಕೆದಾಟು ಯೋಜನೆ ವಿಚಾರದಲ್ಲಿ ಬಿಜೆಪಿ ನಾಯಕರು ಎರೆಡೆರೆಡು ನಾಲಿಗೆಯಿಂದ ಮಾತನಾಡುತ್ತಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.. ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಮೇಕೆದಾಟು ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಳೆದಿರುವ ಗಟ್ಟಿನಿಲುವಿಗೆ ನಮ್ಮ ಬೆಂಬಲವಿದೆ.

Related posts

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

April 1, 2026
SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

April 1, 2026

ಆದರೆ ಈ ಯೋಜನೆ ಕುರಿತು ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಬೇಕು.  ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲಿಸುತ್ತಿದ್ದಾರೆ.ಯಾಕೆ ಈ ದಂದ್ವ ನೀತಿ..? ಎಂದು ಪ್ರಶ್ನಿಸಿದ್ದಾರೆ.

ನೆಹರು ಕುಟುಂಬದ ತ್ಯಾಗ ದೊಡ್ಡದು. ಅವರಂತೆ ಯಾರು ಕೂಡ ತ್ಯಾಗ ಮಾಡಿಲ್ಲ : ಡಿಕೆಶಿ

ಅಲ್ಲದೇ ಮೇಕೆದಾಟು ಬಗ್ಗೆ ಸಿಎಂ ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ, ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿ ಮುಚ್ಚಿಸದೆ ಹೋದರೆ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸಿ.ಟಿ ವಿರುದ್ಧ ಖಾರವಾಗಿ ವಾಗ್ದಾಳಿ ನಡೆಎಸಿದ್ದಾರೆ.

ಅಲ್ಲದೇ ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ಕುವೆಂಪು ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿಗೆ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ ತಿಳಿಸಿದ್ದಾರೆ..

ಜೊತೆಗೆ ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯವನ್ನಾಗಲಿ, ರಾಜಿಯನ್ನಾಗಲಿ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದಿರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು  ಎಂದು ಸಿಎಂ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.

ಇದೇ ವೇಳೆ ಕೇಂದ್ರದ ವಿರುದ್ಧ ಗುಡುಗಿರುವ ಸಿದ್ದರಾಮಯ್ಯ ಅವರು ಕೇಂದ್ರ ಮೇಕೆದಾಟು ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಡುವುದನ್ನು ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ರೀತಿಯಲ್ಲಿ ಇಲ್ಲಿಯೂ ರಾಜಕೀಯ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.

 

 

Tags: #saakshatvCongressmekedatusiddaramaih
ShareTweetSendShare
Join us on:

Related Posts

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

by Shwetha
April 1, 2026
0

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್ ಗಳವರೆಗೆ ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram