‘ಓ.. ಆ… ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ’ : ಸಿದ್ದರಾಮಯ್ಯ
ಬೆಂಗಳೂರು : ಡಿಕೆಶಿ ಮತ್ತು ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಕನಸು ಇದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟಾಂಗ್ ಕೊಟ್ಟಿದ್ದಾರೆ.
ಕುಮಾರಸ್ವಾಮಿ ಅವರ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ ,ಓ.. ಆ… ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ.. ನಾನು ಹಿಜಾಬ್ ಬಗ್ಗೆ ಮಾತನಾಡಿದ್ದು ನಿಜ, ಆದ್ರೆ ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ..
ಅವರು ಯಾರು ನನ್ನ ಬಗ್ಗೆ ಮಾತನಾಡೋಕೆ. ಅವರೂ ಒಂದು ರಾಜಕೀಯ ಪಕ್ಷದ ನಾಯಕರು. ನಾನು ಅವರ ಬಗ್ಗೆ ಮಾತನಾಡಲ್ಲ.. ನಾನ್ಯಾಕೆ ಅವರ ಬಗ್ಗೆ ಮಾತನಾಡಲಿ…ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡೋದಿಲ್ಲ ಎಂದಿದ್ದಾರೆ.