ಈ ಬಾರಿ 130 ಕ್ಕೂ ಅಧಿಕ ಸೀಟ್ ಗಳನ್ನ ಕಾಂಗ್ರೆಸ್ ಗೆಲ್ಲುತ್ತೆ.. 150 ಸ್ಥಾನಗಳನ್ನ ಗೆಲ್ಲುವ ಗುರಿ ಹೊಂದಿದೆ.. ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡೋದು ಗ್ಯಾರಂಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ..
ಮಾಧ್ಯಮದವರ ಜೊತೆಗೆ ಮಾತನಾಡಿರುವ ಅವರು, ನಾವು 150 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ. ಮುಖ್ಯಮಂತ್ರಿಗಳ ಅಭಿಪ್ರಾಯ ಬೇರೆ, ಜನರ ಅಭಿಪ್ರಾಯ ಬೇರೆ. ಸಮೀಕ್ಷೆಯಲ್ಲಿ ಜನರು ಹೇಳಿದ್ದನ್ನೇ ಹೇಳ್ತಾರೆ. ಆದರೆ ಸಿಎಂ ಜನರ ಅಭಿಪ್ರಾಯ ಒಪ್ಪಲ್ಲ. ಈ ಬಾರಿ ಉತ್ತಮ ಸಂಖ್ಯೆಯೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡುತ್ತೆ ಎಂದಿದ್ದಾರೆ..








