Siddeshwara Swamiji : ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿತಿ ಗಂಭೀರ; ಕರೆ ಮಾಡಿ ವಿಚಾರಿಸಿದ ಪ್ರಧಾನಿ…
ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು ಆಶ್ರಮದ ಕೊಠಡಿಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವರದ ಪ್ರಹ್ಲಾದ್ ಜೋಶಿ ಅವರು ವಿಜಯಪುರಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಪ್ರಧಾನಿಯರು ಪೋನ್ ಮೂಲಕ ಸ್ವಾಮಿಜಿಗಳ ಆರೋಗ್ಯ ವಿಚಾರಿಸಿದ್ದಾರೆ.
ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಹಲವು ಮಠಾಧೀಶರು ಆಶ್ರಮದಲ್ಲಿ ಬೀಡು ಬಿಟ್ಟಿದ್ದಾರೆ.
“ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನನಗೆ ಕರೆ ಮಾಡಿ ನನ್ನ ಮೂಲಕ ಶ್ರೀಗಳ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದರು” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಇಂದು ವಿಜಯಪುರದ ಜ್ಞಾನಯೋಗಾಶ್ರಮದ ಶ್ರಿ ಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದು, ವೈದ್ಯರ ಬಳಿ ಅವರ ಆರೋಗ್ಯದ ಮಾಹಿತಿಯನ್ನು ಪಡೆದುಕೊಂಡೆನು. ಪೂಜ್ಯ ಶ್ರೀಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
Siddeshwara Swamiji : Siddeshwara Swamiji’s health condition is serious; The Prime Minister called and inquired…