ಜನರನ್ನು ಬದುಕಿಸಿ ನಿಮ್ಮ ಪಾಪ ತೊಳ್ಕೊಳ್ಳಿ-ರಾಜಾಹುಲಿಗೆ ಹುಲಿಯಾ ಕಿಡಿಕಿಡಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ಆಸ್ಪತ್ರೆಗಳ ಬೆಡ್ ಪಡೆದು ಚಿಕಿತ್ಸೆ ಕೊಡಿಸಲು ಹರಸಾಹಸ ಪಡುತ್ತಿದೆ.
ಈ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಗಂಭೀರ ಆರೋಪ ಮಾಡಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಹೊಂದಿಸುವುದೇ ಸಮಸ್ಯೆಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ,ಅಧಿಕಾರದ ಕುರ್ಚಿ ಖರೀದಿಗೆ ಸಂಗ್ರಹಿಸಿದ ದುಡ್ಡಲ್ಲಿ ಶಿಲ್ಕು ಉಳಿಸಿದ್ದರೆ ಅದನ್ನಾದರೂ ಬಳಸಿಕೊಂಡು ಹಾಸಿಗೆ-ಸಲಕರಣೆ ಖರೀದಿಸಿ ಜನರನ್ನು ಬದುಕಿಸಿ, ಕೊರೊನಾ ಚಿಕಿತ್ಸೆ ಯಲ್ಲಿ 2200 ಕೋಟಿ ಅವ್ಯವಹಾರ ಆಗಿದೆ. ಆದರೆ, ಕೊರೊನಾ ಚಿಕಿತ್ಸೆಯಲ್ಲಿನ ಅವ್ಯವಹಾರದ ಆರೋಪಕ್ಕೆ ಒಬ್ಬ ಸಚಿವರು ಜತೆಯಲ್ಲಿ ಪ್ರವಾಸಕ್ಕೆ ಕರೆದಿದ್ದಾರೆ, ಇನ್ನೊಬ್ಬರು ಆಸ್ಪತ್ರೆಯ ಹೊಣೆ ಹೊರಲು ಹೇಳಿದ್ದಾರೆ. ಇವರಿಬ್ಬರಿಗೂ ಒಂದೇ ಉತ್ತರ, ದಯವಿಟ್ಟು ರಾಜೀನಾಮೆ ನೀಡಿ, ನಾವು ಪ್ರವಾಸನೂ ಮಾಡ್ತೇವೆ, ಒಂದು ಆಸ್ಪತ್ರೆಯದ್ದಲ್ಲ, ಇಡೀ ರಾಜ್ಯದ ಹೊಣೆಯನ್ನೂ ಹೊರುತ್ತೇವೆ ಎಂದು ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.








