ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಕೆಲ ದಿನಗಳ ಹಿಂದೆ ಕೆಲ ಶಾಸಕರು ಹಾಗೂ ಕೆಲವು ಸಚಿವರು ನೀಡಿದ ವಾಕ್ಸಮರ ಹೇಳಿಕೆಗಳು ಕಾಂಗ್ರೆಸ್ ಹೈಕಮಾಂಡ್ ಗಮನಸೆಳೆದಿದ್ದವು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ವಿಷಯಕ್ಕೆ ಕಡಿವಾಣ ಹಾಕುವ ಪ್ರಯತ್ನ ಮಾಡಿತ್ತು.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಇಬ್ಬರೂ ಹಿರಿಯ ನಾಯಕರು ಹೈಕಮಾಂಡ್ ಅನ್ನು ಭೇಟಿಯಾಗಿ ಪ್ರಮುಖ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಈ ಭೇಟಿಯು ಶಿಸ್ತು, ಪಕ್ಷದ ಸಂಘಟನೆ, ಮುಂದಿನ ರಾಜಕೀಯ ತಂತ್ರಗಳ ಕುರಿತು ಇರಬಹುದೆಂಬ ಅಂದಾಜುಗಳು ವ್ಯಕ್ತವಾಗುತ್ತಿವೆ. ವಿಶೇಷವಾಗಿ ಸಿದ್ದು-ಡಿಕೆಶಿ ಇಬ್ಬರೂ ಒಟ್ಟಿಗೆ ದೆಹಲಿಗೆ ಹಾರಾಟ ಮಾಡಿರುವುದು, ಪಕ್ಷದಲ್ಲಿ ಪ್ರಮುಖ ತೀರ್ಮಾನ ತೆಗೆದುಕೊಳ್ಳಲಾಗುತ್ತಾ? ಎಂಬ ನಿರೀಕ್ಷೆ ಹೆಚ್ಚಿಸಿದೆ.








