Siddu vs DKS : ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟಾಂಗ್
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಮದುವೆ ಕಾರ್ಯಕ್ರಮ ವೇದಿಕೆಯಲ್ಲಿ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಮೂಲಕ ತಮಗೆ ಸೆಡ್ಡು ಹೊಡೆದಿದ್ದ ಸಿದ್ದರಾಮಯ್ಯ ಅವರಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಅಧಿಕಾರವಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ. ಆದರೆ ಈಗ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ನನಗೂ ಇಲ್ಲ, ಸಿದ್ದರಾಮಯ್ಯ ಅವರಿಗೂ ಇಲ್ಲ. ಆ ಅಧಿಕಾರವೇನಿದ್ದರೂ ಎಐಸಿಸಿಗೆ ಮಾತ್ರ ಇದೆ. ಮಲ್ಲಿಕಾರ್ಜುನ ಖರ್ಗೆ ಅಥವಾ ಹೈಕಮಾಂಡ್ ಗೆ ಮಾತ್ರ ಅಭ್ಯರ್ಥಿಯ ತೀರ್ಮಾನಿಸುವ ಅಧಿಕಾರ ಇದೆ ಎಂದು ತಿಳಿಸಿದ್ದಾರೆ.
ಬಹುಶಃ ಕೊಪ್ಪಳದವರನ್ನು ಹುರಿದುಂಬಿಸಲು ಸಿದ್ದರಾಮಯ್ಯ ಹಾಗೆ ಹೇಳಿರಬಹುದು ಅಷ್ಟೇ. ಆದರೆ ಅಭ್ಯರ್ಥಿಗಳನ್ನು ತೀರ್ಮಾನಿಸುವುದು ರಾಜ್ಯ ನಾಯಕರಲ್ಲ. ಆ ಅಧಿಕಾರವಿರುವುದು ಹೈಕಮಾಂಡ್ ಗೆ ಮಾತ್ರ ಎಂದು ಅವರು ಹೇಳಿದ್ದಾರೆ.
siddu-vs-dks-dk-sivakumar-tong-to-siddaramaiah-who-announced-the-candidates