SidduVsDKS | ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡ!
ಬೆಂಗಳೂರು : ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿಕೆಶಿ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.
ಕೊಪ್ಪಳದ ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತ್ಯೇಕ ವಿಮಾನದಲ್ಲಿ ಬಂದಿದ್ದರು.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಜಗತ್ತಿನ ಕಣ್ಣಿಗೆ ಮಣ್ಣೆರೆಚಲು ಡಿಕೆಶಿ & ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಬರುವುದೇನು, ಜೊತೆಯಾಗಿ ಎತ್ತಿನ ಗಾಡಿ ಓಡಿಸುವುದೇನು, ಚಿಂತನ ಶಿಬಿರದಲ್ಲಿ ಫೋಟೋಗೆ ಫೋಸ್ ಕೊಟ್ಟಿದ್ದೇನು..!

ಮುಖವಾಡ ಕಳಚುತ್ತಿದೆ, ಸೃಷ್ಟಿಯಾದ ಕಂದಕ ಲೋಕಕ್ಕೆ ಸಾರಿ ಸಾರಿ ಹೇಳುತ್ತಿದೆ, ಇದು #SidduVsDKS ಕದನವೆಂದು. ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡ!
ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ. ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿಕೆಶಿ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ. #SidduVsDKS ಕಲಹ ಈಗ ಬೇರೆಯೇ ಹಂತ ತಲುಪುತ್ತಿದೆ, ಸಿದ್ದರಾಮಯ್ಯ ವಿರೋಧಿ ಪಾಳಯ ಜಾಗೃತಗೊಂಡಿದೆ ಎಂದು ಬರೆದುಕೊಂಡಿದೆ.








