ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಹಾಗೂ ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿ, ಪೋಸ್ಟರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವರ್ಮಾ ‘ವ್ಯೂಹಂ’ (Vyuham) ಸಿನಿಮಾ ಮಾಡಿದ್ದು, ಈ ಸಿನಿಮಾಗೆ ಆಂಧ್ರದ ಟಿಡಿಪಿ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಅವರು ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಧ್ರ ಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ವ್ಯೂಹಂ ಸಿನಿಮಾ ರಿಲೀಸ್ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಜೀವನ ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎಂಬುವುದು ಅವರ ಆರೋಪವಾಗಿದೆ.