ದೇಶ್ ವಾಸಿಯೋ ಗಮನಿಸಿ : ಕೇಂದ್ರದಿಂದ ಮಹತ್ವದ ಯೋಜನೆ ಘೋಷಣೆ modi
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ದಿನಂಪ್ರತಿ ಸಾವಿರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಕೊರೊನಾ ತಡೆಗೆ ಕೆಲ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆ ಕೇಂದ್ರ ಸರ್ಕಾರ ಕೂಲಿ ಕಾರ್ಮಿಕರು, ಬಡವರನ್ನ ದೃಷ್ಠಿಯಲ್ಲಿಟ್ಟುಕೊಂಡು ಮಹತ್ವದ ಯೋಜನೆಯನ್ನ ಘೋಷಣೆ ಮಾಡಿದೆ.
ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ ತಿಂಗಳಿಂದ ಜೂನ್ 2021ರವರೆಗೆ 80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದಾಗಿ ಘೋಷಣೆ ಮಾಡಿದೆ.
ಇದಕ್ಕಾಗಿ ಸರ್ಕಾರ 26,000 ಕೋಟಿ ರೂ.ಗಿಂತಲೂ ಅಧಿಕ ಹಣ ಖರ್ಚು ಮಾಡುತ್ತಿದೆ ಎಂದು ವರದಿಯಾಗಿದೆ.
ಅಂದಗಾಗೆ ಕೊರೊನಾದಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಬಡ ವರ್ಗದವರಿಗೆ ಉಚಿತವಾಗಿ ಪಡಿತರ ನೀಡುವುದಾಗಿ ಉದ್ಧವ್ ಠಾಕ್ರೆ ಘೋಷಣೆ ಮಾಡಿದ್ದಾರೆ.