ನವದೆಹಲಿ : ಭಾರತ ಚೀನಾ ಗಡಿಯಲ್ಲಿ ಉದ್ವಿಗ್ನತೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ಟ್ವೀಟ್ ನಲ್ಲಿ..
ಚೀನಾದೊಂದಿಗಿನ ಗಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುವುದು ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರೀ ಊಹಾಪೋಹಗಳು ಹಾಗೂ ಅನಿಶ್ಚಿತತೆಗೆ ಕಾರಣವಾಗಲಿದೆ.ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗಳ ಬಗ್ಗೆ ಮೌನ ಮುರಿದು ವಾಸ್ತವದಲ್ಲಿ ಏನು ನಡೆಯುತ್ತಿದೆ ಎಂದು ಹೇಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಕಳೆದ ಮೂರು ವಾರಗಳಿಂದ ಗಡಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಸೈನಿಕರು ಮುಖಾಮುಖಿಯಾಗಿದ್ದಾರೆ. ಚೀನಾ ಯುದ್ಧ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಈ ಹಿನ್ನಲೆ ದೇಶದ ಜನರಿಗೆ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.








