ರಾಯ್ಬರೇಲಿ: ಪಾಪಿ ಕಾಮುಕನೊಬ್ಬ ತನ್ನ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಈ ಘಟನೆ ನಡೆದಿದೆ. ಬರೇಲಿಯ ಥಾನಾ ಕ್ಯಾಂಟ್ ಪ್ರದೇಶದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ತನ್ನ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಆರೋಪಿಸಿದ್ದಾಳೆ. ಆಕೆಯ ತಂದೆ ಆಗಾಗ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಬುಧವಾರ ರಾತ್ರಿ ಕುಡಿದು ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಬಾಲಕಿ ಆರೋಪಿಸಿದ್ದಾರೆ.
ಆಕೆಯ ತಾಯಿ ತನ್ನ ತಂದೆಗೆ ವಿಚ್ಛೇದನ ನೀಡಿಲ್ಲ. ಆದರೆ ಅವಳು ಇನ್ನೊಬ್ಬ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದಾಳೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ. ತಾಯಿ ಹಲವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಕೂಡ ಆರೋಪಿಸಿದ್ದಾಳೆ. ತಂದೆ ಮದ್ಯದ ಅಮಲಿನಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು, ಆಕೆ ವಿರೋಧಿಸಿದಾಗ ಆಕೆಗೆ ಥಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.