ಚೆನ್ನೈ: ಇತ್ತೀಚೆಗೆ ಕಾಮುಕರ ಅಟ್ಟಹಾಸ ಸಮಾಜದಲ್ಲಿ ಹೆಚ್ಚಾಗುತ್ತಿವೆ. 5 ವರ್ಷದ ಬಾಲಕಿಗೆ ತಂದೆಯೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.
ಚೆನ್ನೈನಲ್ಲಿ ತನ್ನ 5 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನು ಈಗ ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಕಳೆದ 6 ತಿಂಗಳಿಂದ ಚೆನ್ನೈನ ತಾಂಬರಂನಲ್ಲಿ ತಂದೆಯೇ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ.
ಪಶ್ಚಿಮ ತಾಂಬರಂನ ಪಟೇಲ್ ನಗರದ ನಿವಾಸಿ ಸೌಂದರರಾಜನ್ (37) ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಈ ಕಾಮುಕನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದರಲ್ಲಿ 7 ವರ್ಷದ ಹಿರಿಯ ಮಗಳು ತಾಂಬರಂ ಮುನ್ಸಿಪಲ್ ಕಾರ್ಪೊರೇಷನ್ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಮತ್ತು 5 ವರ್ಷದ ಕಿರಿಯ ಮಗಳು ಅದೇ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದಳು.
1ನೇ ಕ್ಲಾಸ್ ಓದುತ್ತಿರುವ ಮಗಳ ಮೇಲೆ ತಂದೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಕೆಲವು ದಿನಗಳ ಹಿಂದೆ ಕಿರಿಯ ಮಗಳನ್ನು ಸ್ನಾನಕ್ಕೆ ಕರೆದುಕೊಂಡು ಹೋಗುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಕಂಡು ತಾಯಿ, ಅನುಮಾನಗೊಂಡು ವಿಚಾರಿಸಿದ್ದಾಗ ಮಗಳು ತನ್ನೊಂದಿಗೆ ಕೆಟ್ಟದಾಗಿ ವರ್ತಿಸುತ್ತಾರೆ ಎಂದು ಹೇಳಿಕೊಂಡಿದ್ದಾಳೆ. ಆನಂತರ ತಾಯಿ ತಾಂಬರಂ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಜೈಲಿಗೆ ಅಟ್ಟಿದ್ದಾರೆ.