ಪಾವಗಡ ಶಾಸಕ ವೆಂಕಟರವಣಪ್ಪ ಅವರ ಪುತ್ರ ವೆಂಕಟೇಶ್ ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಪಾವಗಡ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಗೌಪ್ಯವಾಗಿ ಸಭೆ ನಡೆಸಿ, ಶಾಸಕರ ಪುತ್ರನಿಗೆ ಟಿಕೆಟ್ ಘೋಷಣೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಕೈ ಟಿಕೆಟ್ ಆಕಾಂಕ್ಷಿ ಗಾಯಿತ್ರಿ ಬಾಯಿ ಅವರು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ. ಮಾಜಿ ಶಾಸಕ ಸೋಮ್ಲಾನಾಯ್ಕ ಅವರ ನೇತೃತ್ವದಲ್ಲಿ ಸಭೆ ನಡೆಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಮಗೆ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಗಾಯಿತ್ರಿ ಬಾಯಿ ಇದ್ದರು. ಆದರೆ, ಪಕ್ಷದ ನಾಯಕರು ವೆಂಕಟೇಶ್ ಗೆ ಟಿಕೆಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸ್ವತಂತ್ರ ಅಭ್ಯರ್ಥಿ ಅಥವಾ ಬೇರೆ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.