ಪಾಪಿ ಮಗನೊಬ್ಬ ತಾಯಿಯನ್ನೇ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಊಟದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆರಂಭವಾಗಿತ್ತು. ಅದು ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಈ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 26 ವರ್ಷದ ಯುವಕನೊಬ್ಬ ತಾಯಿಯೊಂದಿಗೆ ಜಗಳವಾಡಿ ಕೋಪದಲ್ಲಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ.
ರೇವದಂಡ ಹತ್ತಿರದ ನವಖರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ತೀವ್ರ ಸುಟ್ಟ ಗಾಯದಿಂದ ಬಳಲುತ್ತಿದ್ದ ಮಹಿಳೆಯನ್ನು ಕೂಡಲೇ ಅಲಿಬಾಗ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಊಟ ತಯಾರಿಸಿ ಬಡಿಸುವ ವಿಚಾರದಲ್ಲಿ ಜಯೇಶ್, ತಾಯಿಗೆ ಥಳಿಸಿದ್ದಾನೆ. ಕೋಪದ ಭರದಲ್ಲಿ, ಮನೆಯ ಮುಂಭಾಗದ ತೆರೆದ ಜಾಗಕ್ಕೆ ಎಳೆದೊಯ್ದು, ಒಣಮರ ಸಂಗ್ರಹಿಸಿ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.