ಬಾಲಿವುಡ್ ನ ಗಾಯಕ ಹನಿ ಸಿಂಗ್ ತಮ್ಮ 13 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ ಎನ್ನಲಾಗುತ್ತಿದೆ.
ಪತ್ನಿ ಶಾಲಿನಿ ತಲ್ವಾರ್ ಮತ್ತು ಹನಿ ಸಿಂಗ್ (Honey Singh) ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ ಎನ್ನಲಾಗುತ್ತಿದೆ. ದೆಹಲಿ ಫ್ಯಾಮಿಲಿ ಕೋರ್ಟ್ ಈ ಜೋಡಿಗೆ ವಿಚ್ಛೇದನ ನೀಡಿದೆ.
ಪಂಜಾಬಿ (Punjabi)ಖ್ಯಾತ ಗಾಯಕ ಹನಿ ಸಿಂಗ್ ಬಾಲಿವುಡ್ ನಲ್ಲಿಯೂ ತಮ್ಮದೆಯಾದ ಟ್ರೆಂಡ್ ಕ್ರಿಯೇಟ್ ಮಾಡಿದ್ದರು. ಈಗ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ಹಿಂಸೆಯಾಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿದ್ದರು. ಇದರ ಬೆನ್ನಲ್ಲಿಯೇ ಹನಿ ಸಿಂಗ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಸದ್ಯ ಇಬ್ಬರೂ ಬೇರೆ ಬೇರೆಯಾಗಿದ್ದಾರೆ.
ಪತ್ನಿಗೆ ಜೀವನಾಂಶವಾಗಿ ಒಂದು ಕೋಟಿ ರೂಪಾಯಿ ನೀಡಿದ್ದಾರೆ ಎನ್ನಲಾಗಿದೆ. ಈ ಜೋಡಿ 2001ರಲ್ಲಿ ವಿವಾಹವಾಗಿತ್ತು.