ಸಂಗೀತ ಲೋಕದ ಸ್ವರ ಮಾಂತ್ರಿಕನ ಅಗಲಿಕೆಗೆ ಅನೇಕ ರಾಜಕೀಯ ಮುಖಂಡರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಮಾಜಿ ಪ್ರದಾನಿ ದೇವೇಗೌಡ
“ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ. ಅವರ ಅಗಲಿಕೆಯಿಂದಾಗಿ ದೇಶದ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. 
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಇನ್ನೂ “ಸುಪ್ರಸಿದ್ದ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಕನ್ನಡ ಸೇರಿದಂತೆ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದ ಎಸ್‍ಪಿಬಿ ಸರಳ, ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ.
ಎಸ್‍ಪಿಬಿ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ” ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.









