‘ಕನ್ನಡಕ್ಕಾಗಿ ನಾವು’ ಗೀತಗಾಯನ. ಲಕ್ಷ ಕಂಠಗಳಲ್ಲಿ ಮೊಳಗಿದ ‘ಕನ್ನಡ ಡಿಂಡಿಮ’
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಸಿದ್ದ ‘ಕನ್ನಡಕ್ಕಾಗಿ ನಾವು’ ಗೀತಗಾಯನ ಅಭಿಯಾನ ಕರ್ನಾಟಕದಾದ್ಯಾಂತ ಯಶಸ್ವಿಯಾಗಿ ಜರುಗಿದೆ.
ರಾಜ್ಯೋತ್ಸವದ ಹಿನ್ನಲೆಯಲ್ಲಿ ಇಂದಿನಿಂದ ಒಂದುವಾರಗಳ ಕಾಲ ‘ಕನ್ನಡಕ್ಕಾಗಿ ನಾವು’ ಗೀತಗಾಯನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಇವತ್ತು ಕರ್ನಾಟಕದ ವಿವಿಧ ಕಡೆಗಳಲ್ಲಿ ಏಕಕಾಲಕ್ಕೆ 11 ಲಕ್ಷ ಮಂದಿ ಕನ್ನಡ ಹಾಡುಗಳನ್ನ ಹಾಡಿದರು.
ಬೆಂಗಳೂರಿನ ವಿಧಾನಸೌಧದ ಮೆಟ್ಟಿಲು ಬಳಿ ಮುಖ್ಯ ಕಾರ್ಯಕ್ರಮ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಸುನಿಲ್ ಕುಮಾರ್, ಶಾಸಕ ಸುನಿಲ್ ನಾಯಕ್ , ಐಎಎಸ್, ಐಪಿಎಸ್ ಅಧಿಕಾರಿಗಳು ಪಾಲ್ಗೊಂಡಿದ್ದರು. ಹುಬ್ಬಳ್ಳಿಲ್ಲಿ ಬಸವರಾಜ್ ಬೊಮ್ಮಾಯಿಯವರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಕಚೇರಿಗಳು, ರೈಲು ನಿಲ್ದಾಣ, ಖಾಸಗಿ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲೂ ಗಾಯನ ನಡೆಯಿತು.ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯ ಜೊತೆಗೆ ‘ಬಾರಿಸು ಕನ್ನಡ ಡಿಂಡಿಮವ’, ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಿದರು.








